Connect with us

ಕ್ರೀಡೆ

ಸ್ಟಾರ್ ಆಟಗಾರರನ್ನು ಕೈ ಬಿಟ್ಟ ರಾಜಸ್ಥಾನ್: ನಾಲ್ವರು ರಿಟೈನ್.!

Published

on

ಐಪಿಎಲ್ ಮೆಗಾ ಹರಾಜಿಗೂ ಮುನ್ನ ತನ್ನೆಲ್ಲಾ ವಿದೇಶಿ ಆಟಗಾರರನ್ನು ಬಿಡುಗಡೆ ಮಾಡಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ನಿರ್ಧರಿಸಿದೆ. ಈ ಪಟ್ಟಿಯಲ್ಲಿ ಪ್ರಮುಖ ಆಟಗಾರರು ಇರುವುದು ವಿಶೇಷ. ಇನ್ನು ಆರ್ಆರ್ ಫ್ರಾಂಚೈಸಿಯು ನಾಲ್ವರು ಭಾರತೀಯ ಆಟಗಾರರನ್ನು ಮಾತ್ರ ರಿಟೈನ್ ಮಾಡಿಕೊಳ್ಳಲು ಮುಂದಾಗಿದೆ.

ಐಪಿಎಲ್ ಸೀಸನ್-18 ರ ಮೆಗಾ ಹರಾಜಿಗೂ ಮೊದಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಆದರೆ ಈ ಪಟ್ಟಿಯಲ್ಲಿ ಸ್ಟಾರ್ ಆಟಗಾರರಾದ ಜೋಸ್ ಬಟ್ಲರ್, ಟ್ರೆಂಟ್ ಬೌಲ್ಟ್, ರವಿಚಂದ್ರನ್ ಅಶ್ವಿನ್ ಹಾಗೂ ಯುಜ್ವೇಂದ್ರ ಚಹಲ್ ಇಲ್ಲ ಎಂಬುದು ವಿಶೇಷ.

ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ತನ್ನ ಮೊದಲ ರಿಟೈನ್ ಆಗಿ ನಾಯಕ ಸಂಜು ಸ್ಯಾಮ್ಸನ್ ಅವರನ್ನು ಉಳಿಸಿಕೊಂಡಿದೆ. ಇದಕ್ಕಾಗಿ ಆರ್ಆರ್ ಫ್ರಾಂಚೈಸಿ ಸ್ಯಾಮ್ಸನ್ ಅವರಿಗೆ 18 ಕೋಟಿ ರೂ. ನೀಡಲಿದೆ ಎಂದು ತಿಳಿದು ಬಂದಿದೆ.

ಟೀಮ್ ಇಂಡಿಯಾ ಯುವ ಸೆನ್ಸೇಷನ್ ಯಶಸ್ವಿ ಜೈಸ್ವಾಲ್ ಅವರನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ 14 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಕಳೆದ ಕೆಲ ಸೀಸನ್ಗಳಿಂದ ಆರ್ಆರ್ ಪರ ಅತ್ಯುತ್ತಮ ಪ್ರದರ್ಶನ ನೀಡಿರುವ ಜೈಸ್ವಾಲ್ ಐಪಿಎಲ್ 2025 ರಲ್ಲೂ ರಾಜಸ್ಥಾನ್ ಪರ ಇನಿಂಗ್ಸ್ ಆರಂಭಿಸಲಿದ್ದಾರೆ.

ಐಪಿಎಲ್ 2024 ರಲ್ಲಿ ಅತ್ಯುತ್ತಮ ಆಲ್ರೌಂಡರ್ ಆಟದೊಂದಿಗೆ ಮಿಂಚಿರುವ ರಿಯಾನ್ ಪರಾಗ್ ಅವರನ್ನು ಸಹ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ತಂಡದಲ್ಲೇ ಉಳಿಸಿಕೊಂಡಿದೆ. ಇದಕ್ಕಾಗಿ ಪರಾಗ್ ಅವರಿಗೆ 11 ಕೋಟಿ ರೂ. ಪಾವತಿಸಲಿದೆ ಎಂದು ತಿಳಿದು ಬಂದಿದೆ.

ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಬೌಲರ್ಗಳ ಪಟ್ಟಿಯಲ್ಲಿ ಉಳಿಸಿಕೊಂಡಿರುವುದು ಸಂದೀಪ್ ಶರ್ಮಾ ಅವರನ್ನು. ಡೆತ್ ಬೌಲಿಂಗ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಸಂದೀಪ್ ಅವರನ್ನು ನಾಲ್ಕನೇ ರಿಟೈನ್ ಆಗಿ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ.

ಇನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಬಿಡುಗಡೆ ಮಾಡುವ ಆಟಗಾರರ ಪಟ್ಟಿಯಲ್ಲಿ ಜೋಸ್ ಬಟ್ಲರ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೇಲ್, ಟ್ರೆಂಟ್ ಬೌಲ್ಟ್, ಚಹಲ್ನಂತಹ ಸ್ಟಾರ್ ಆಟಗಾರರಿದ್ದು, ಇವರಲ್ಲಿ ಯಾರ ಮೇಲೆ ಆರ್ಟಿಎಂ ಆಯ್ಕೆಗಳನ್ನು ಬಳಸಿಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕು.

Advertisement

Trending