Connect with us

ರಾಜ್ಯ

ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ

Published

on

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಬಿಜೆಪಿಯಲ್ಲಿ ಹೊಂದಾಣಿಕೆ ವಾಕ್ಸಮರ ತಾರಕಕ್ಕೇರಿತ್ತು. ಚುನಾವಣೆಯಲ್ಲಿ ಹೀನಾಯ ಸೋಲಿಗೆ ಹೊಂದಾಣಿಕೆ ರಾಜಕಾರಣವೇ ಮುಖ್ಯ ಕಾರಣ ಎಂಬ ಸ್ವಪಕ್ಷೀಯರ ಬಹಿರಂಗ ಹೇಳಿಕೆ ನೀಡಿದ್ದರು.

ಇದರ ಬೆನ್ನಲ್ಲೇ ಇದೀಗ ಪಕ್ಷದ ಹೊಂದಾಣಿಕೆ ರಾಜಕಾರಣಿಗಳ ವಿರುದ್ಧ ವಿಜಯೇಂದ್ರ ಗುಡುಗಿದ್ದಾರೆ.ಹಾಸನಾಂಬೆ ದೇವಿ ದರ್ಶನ ಪಡೆದು ಸುದ್ದಿಗಾರರಿಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಯಾರ್ಯಾರು ಹೊಂದಾಣಿಕೆ ರಾಜಕೀಯ ಮಾಡುತ್ತಾರೆ ಅವರನ್ನ ಹೊರ ಹಾಕುವ ಕೆಲಸವನ್ನು ಯಶಸ್ವಿಯಾಗಿ ಮಾಡುತ್ತಿದ್ದೇವೆ. ನಮ್ಮ ಪಕ್ಷ ಶುದ್ದೀಕರಣ ಅಗಬೇಕೆಂದು ಅನೇಕ ಹಿರಿಯರ ಆಸೆ ಇತ್ತು. ಅವರ ಆಸೆಗೆ ತಕ್ಕಂತೆ ಶುದ್ದೀಕರಣ ಕೂಡ ಆಗುತ್ತಿದೆ. ಬರುವ ದಿನಗಳಲ್ಲಿ ಎಲ್ಲವೂ ಕೂಡ ಸರಿ ಹೋಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೋಳಿ ಅಸಮಾಧಾನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಅವರ ಅಸಮಾಧಾನ ಹೊರಹಾಕಲು ಬೇರೆ ವ್ಯವಸ್ಥೆ ಮಾಡಿಕೊಡಬೇಕು. ಆ ದಿಕ್ಕಿನಲ್ಲಿ ಯೋಚನೆ ಮಾಡುತ್ತಿದ್ದೇವೆ. ನಾನಂತೂ ಅದರ ಬಗ್ಗೆ ಏನು ತಲೆಕೆಡಿಸಿಕೊಳ್ಳುವ ಪ್ರಶ್ನೆ ಇಲ್ಲ. ಮಾಡಲು ಬೇಕಾದಷ್ಟು ಕೆಲಸವಿದೆ. ಸಂಘಟನೆ ಕೆಲಸ ಇದೆ, ಉಪಚುನಾವಣೆ ಇದೆ. ಇವತ್ತು ವಕ್ಫ್ ವಿಚಾರವಾಗಿ ಹೋರಾಟವನ್ನು ಕೈಗೊಳ್ಳಬೇಕಾಗುತ್ತದೆ. ಆ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ ಎಂದು ಹೇಳುವ ಮೂಲಕ ಸ್ವಪಕ್ಷದ ವಿರೋಧಿಗಳಿಗೆ ಟಾಂಗ್ ಕೊಟ್ಟರು.

Advertisement

Trending