Connect with us

ದೇಶ

ಒಂದು ರಾಷ್ಟ್ರ ಒಂದು ಚುನಾವಣೆ, ಶೀಘ್ರದಲ್ಲೇ ಏಕರೂಪ ನಾಗರಿಕ ಸಂಹಿತೆ; ಪ್ರಧಾನಿ ಮೋದಿ

Published

on

ಅಹಮದಾಬಾದ್: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 149ನೇ ಜನ್ಮದಿನದ ಅಂಗವಾಗಿ ಗುಜರಾತ್‌ನ ಏಕತಾ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಒಂದು ರಾಷ್ಟ್ರ, ಒಂದು ಚುನಾವಣೆ ನೀತಿಯನ್ನು ಶೀಘ್ರದಲ್ಲೇ ಜಾರಿಗೊಳಿಸುವುದಾಗಿ ಹೇಳಿದ್ದಾರೆ.

ಪ್ರತಿ ವರ್ಷ ಅಕ್ಟೋಬರ್ 31ರಂದು ವಲ್ಲಭಬಾಯಿ ಪಟೇಲ್ ಅವರ ಜನ್ಮದಿನದ ನೆನಪಿಗಾಗಿ ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿವಸ್ ಆಚರಣೆಗಾಗಿ ಇಂದು ಮೆಗಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದರಲ್ಲಿ ಪಾಲ್ಗೊಂಡು ಮೋದಿ, “ಈ ಬಾರಿಯ ರಾಷ್ಟ್ರೀಯ ಏಕತಾ ದಿನವು ಅದ್ಭುತವಾದ ಕಾಕತಾಳೀಯತೆಯನ್ನು ತಂದಿದೆ. ಒಂದು ಕಡೆ ಇಂದು ನಾವು ಏಕತೆಯ ಹಬ್ಬವನ್ನು ಆಚರಿಸುತ್ತಿದ್ದೇವೆ ಮತ್ತು ಇನ್ನೊಂದು ಕಡೆ ಇಂದು ದೀಪಾವಳಿ ಹಬ್ಬವಾಗಿದೆ” ಎಂದು ಹೇಳಿದರು.

Advertisement

Trending