Connect with us

Politics

ಕಾರ್ಕಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ಹಾಗೂ ಅಧ್ಯಕ್ಷ, ಸದಸ್ಯರ ಅಧಿಕಾರ ಸ್ವೀಕಾರ

Published

on

ಕಾರ್ಕಳ: ಡಿ.17. ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ಹಾಗೂ ಅಧ್ಯಕ್ಷ, ಸದಸ್ಯರುಗಳ ಅಧಿಕಾರ ಸ್ವೀಕಾರ ಸಮಾರಂಭವು ಕಾರ್ಕಳ ತಾಲೂಕು ಪಂಚಾಯತ್ ಕಚೇರಿ ಕಟ್ಟದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹಾಗೂ ಜಿಲ್ಲಾ ಉಪಾಧ್ಯಕ್ಷರಾದ ಉದಯ ಶೆಟ್ಟಿ ಮುನಿಯಾಲು ಅವರ ಉಪಸ್ಥಿತಿಯಲ್ಲಿ ನಡೆಯಿತು.

ಕಛೇರಿ ಉದ್ಘಾಟನೆಯ ಬಳಿಕ ತಾಲ್ಲೂಕು ಪಂಚಾಯತ್ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಉದಯ ಶೆಟ್ಟಿ ಮುನಿಯಾಲು ಮಾತನಾಡಿ ಕೊರೊನಾ ಲಾಕ್ಡೌನ್, ಬೆಲೆ ಏರಿಕೆ ಮುಂತಾದ ಸಮಸ್ಯೆಗಳಿಂದ ಅರ್ಥಿಕ ವ್ಯವಸ್ಥೆ ಹದಗೆಟ್ಟಿದ್ದು ಜನ ಸಾಮಾನ್ಯರು ಜೀವನ ನಡೆಸಲು ಕಷ್ಟಪಡುತ್ತಿದ್ದಾರೆ‌. ಅಂತಹಾ ಬಡ ಜನರಿಗೆಂದೇ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದು ಪ್ರತಿ ಯೋಜನೆಗಳೂ ಅರ್ಹ ಫಲಾನುಭವಿಗಳಿಗೆ ತಲುಪುವಂತಾಗಬೇಕು. ಜನರ ಜೀವನಮಟ್ಟ ಸುಧಾರಣೆಗಾಗಿ ರಾಜ್ಯ ಸರ್ಕಾರ ಕೊಡುತ್ತಿರುವ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲರೂ ಶ್ರಮಿಸುವಂತೆ ಕರೆ ನೀಡಿದರು. ಗ್ಯಾರಂಟಿ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಮಾತನಾಡಿ ಯೋಜನೆಗಳು ಕಾಯ್ದೆಗಳ ರೂಪ ಪಡೆದಾಗ ಬಡವರಿಗೆ ಸಿಗುವ ಸವಲತ್ತನ್ನು ಯಾರಿಂದಲೂ ತಪ್ಪಿಸಲಾಗದು ಎಂದರು.

ತಾಲೂಕು ಗ್ಯಾರಂಟಿ ಸಮಿತಿಯ ನೂತನ ಅಧ್ಯಕ್ಷರಾದ ಅಜಿತ್ ಹೆಗ್ಡೆ ಮಾಳ ಅವರು ಮಾತನಾಡಿ ಗ್ಯಾರಂಟಿ ಅನುಷ್ಠಾನದಲ್ಲಿ ಅಧಿಕಾರಿಗಳ ಸಹಕಾರ ಅಗತ್ಯ, ಎಲ್ಲರೂ ಜೊತೆಯಾಗಿ ಗ್ಯಾರಂಟಿ ಯೋಜನೆಯ ಅನುಷ್ಠಾನಕ್ಕೆ ಶ್ರಮಿಸೋಣವೆಂದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಗ್ಯಾರಂಟಿ ಸಮಿತಿಯ ಎಲ್ಲಾ ಸದಸ್ಯರಿಗೂ ಹೂಗುಚ್ಚ ನೀಡಿ ಶುಭ ಹಾರೈಸಲಾಯಿತು. ಕಾರ್ಯಕ್ರಮದಲ್ಲಿ ತಹಷೀಲ್ದಾರ್ ಪ್ರದೀಪ್ ಆರ್. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಪುರಸಭಾ ಮುಖ್ಯಾದಿಕಾರಿ ರೂಪಾ.ಟಿ. ಶೆಟ್ಟಿ ಹಾಗೂ ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದ ಮುನ್ನ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್ ಉಪಸ್ಥಿತಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು, ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಸಭೆಯ ಬಳಿಕ ಎಲ್ಲಾ ನಾಯಕರು, ಪದಾಧಿಕಾರಿಗಳು, ಗ್ಯಾರಂಟಿ ಸಮಿತಿಯ ಅಧ್ಯಕ್ಷ ಸದಸ್ಯರುಗಳು ಪಾದಯಾತ್ರೆಯ ಮೂಲಕ ಉದ್ಘಾಟನೆಗೊಳ್ಳಲಿರುವ ಕಛೇರಿ ಪ್ರಾಂಗಣಕ್ಕೆ ತಲುಪಿದರು.

Advertisement

Trending