Connect with us

Business

ಕಡ್ತಲ ಗ್ರಾಮೀಣ ಕಾಂಗ್ರೆಸ್ ಮತ್ತು ಮುನಿಯಾಲು ಉದಯ ಶೆಟ್ಟಿ ಅಭಿಮಾನಿ ಬಳಗ ಜಂಟಿ ಆಶ್ರಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Published

on

ಕಡ್ತಲ ಗ್ರಾಮೀಣ ಕಾಂಗ್ರೆಸ್ ಮತ್ತು ಮುನಿಯಾಲು ಉದಯ ಶೆಟ್ಟಿ ಅಭಿಮಾನಿ ಬಳಗ ಕಡ್ತಲ, ಕುಕ್ಕುಜೆ, ಎಳ್ಳಾರೆ ಇವರ ಜಂಟಿ ಆಶ್ರಯದಲ್ಲಿ ಡಿಸೆಂಬರ್ 21 ನೆ ಶನಿವಾರ ಮಧ್ಯಾಹ್ನ 2.00 ಗಂಟೆಗೆ ದೊಂಡೆರಂಗಡಿ ಕಲ್ಲಜಾಲು ಮೈದಾನದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುರುಷರ ಮುಕ್ತ ಹಾಗೂ 65 ಕೆಜಿ ವಿಭಾಗದ ಮುಕ್ತ ಪುರುಷರ ಸೌಹಾರ್ದ ಟ್ರೋಫಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಅಂದು ಸಂಜೆ 7.00 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅಧ್ಯಕ್ಷತೆಯಲ್ಲಿ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವರಾದ ವೀರಪ್ಪ ಮೊಯಿಲಿಯವರಿಂದ ಕಾರ್ಯಕ್ರಮವನ್ನು ಉದ್ಘಾಟನೆಗೊಂಡು, ನಂತರ ಕ್ರೀಡಾಂಗಣದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಡಲಿದ್ದಾರೆ. ಜಯಪ್ರಕಾಶ್ ಹೆಗ್ಡೆ ಹಾಗೂ ವಿನಯ ಕುಮಾರ್ ಸೊರಕೆಯವರು ಪಂದ್ಯಾಟಕ್ಕೆ ಚಾಲನೆಯನ್ನು ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಇನ್ನೊರ್ವ ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹಾಗೂ ಉಭಯ ಜಿಲ್ಲೆಗಳ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ, ಸಹಾಯ ಧನ ವಿತರಣೆ ಹಾಗೂ ಹಿರಿಯ ಕಾಂಗ್ರೆಸಿಗರಿಗೆ ಗೌರವ ಸನ್ಮಾನ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Advertisement

Trending