Connect with us

Sports

ಭಾರತೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದ ಉಡುಪಿ ಜಿಲ್ಲೆಯ ತನುಷ್ ಕೋಟ್ಯಾನ್

Published

on

ಆಸ್ಟ್ರೇಲಿಯಾ ವಿರುದ್ದ ನಡೆಯುತ್ತಿರುವ ಬಾರ್ಡರ್ – ಗಾವಸ್ಕರ್ ಟೆಸ್ಟ್ ಕ್ರಿಕೆಟ್ ಸರಣಿಗೆ ಭಾರತೀಯ ಕ್ರಿಕೆಟ್ ತಂಡದಲ್ಲಿ ಉಡುಪಿ ಜಿಲ್ಲೆಯ ಪಾಂಗಾಳಾದ ಆಟಗಾರ ತನುಷ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ‌.

ತನುಷ್ ಕೋಟ್ಯಾನ್ ಅವರು ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ಮೊಟ್ಟ ಮೊದಲ ಬಾರಿಗೆ ಅಂತರಾಷ್ಟ್ರೀಯ ಕ್ರಿಕೆಟಿಗೆ ಪಾದರ್ಪಣೆ ಮಾಡಿರುವ ತನುಷ್ ಕೋಟ್ಯಾನ್ ಭಾರತೀಯ ಕ್ರಿಕೆಟ್ ತಂಡಕ್ಕೆ ಭರವಸೆಯ ಸ್ಪಿನ್ನರ್ ಹಾಗೂ ಬ್ಯಾಟ್ಸ್ಮನ್ ಆಗುವ ಸಾಮರ್ಥ್ಯವನ್ನು ಹೊಂದಿದ್ದಾರೆ‌

ಭಾರತೀಯ ಕ್ರಿಕೆಟ್ ತಂಡದಲ್ಲಿ ಉಡುಪಿ ಜಿಲ್ಲೆಯ ಆಟಗಾರ ಸ್ಥಾನ ಪಡೆದಿರುವುದರಿಂದ ಉಡುಪಿ ಜಿಲ್ಲೆ ಹೆಮ್ಮೆ ಪಡುವಂತಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಉಡುಪಿ ಜಿಲ್ಲೆಯ ಕ್ರೀಡಾಭಿಮಾನಿಗಳು ತನುಷ್ ಕೋಟ್ಯಾನ್ ಫೋಟೋವನ್ನು ಹಂಚಿಕೊಂಡು ಸಂಭ್ರಮಿಸುತಿದ್ದಾರೆ.

ಉಡುಪಿಯ ಹೆಮ್ಮೆಯ ಆಟಗಾರ “ತನುಷ್ ಕೋಟ್ಯಾನ್” ಅವರಿಗೆ ಅಭಿನಂದನೆಗಳು. ನಿಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ಪಯಣಕ್ಕೆ ಹಾರ್ದಿಕ ಶುಭಾಷಯಗಳು.

Advertisement

Trending