Connect with us

Politics

ಕಾರ್ಕಳದ ರಸ್ತೆ, ಸೇತುವೆ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 13 ಕೋಟಿ ರೂಪಾಯಿ ಅನುದಾನ ಬಿಡುಗಡೆ: ಅಭಿವೃದ್ಧಿ ಶೂನ್ಯ ಎನ್ನುತ್ತಿದ್ದ ಸುನೀಲ್ ಕುಮಾರ್,ಗೆ ಕಪಾಳ ಮೋಕ್ಷ: ಶುಭದರಾವ್

Published

on

ಕಾರ್ಕಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯೊಳಗಿನ ಲೋಕೋಪಯೋಗಿ ಇಲಾಖೆಯ ಅಧೀನಕ್ಜೊಳಪಟ್ಟ ಪ್ರಮುಖ ರಸ್ತೆಗಳು, ಸೇತುವೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರವು ಸುಮಾರು 13 ಕೋಟಿ ರೂಪಾಯಿಗಳಷ್ಟು ಮೊತ್ತದ ಅನುದಾನವನ್ನು ಮಂಜೂರು ಮಾಡಿರುವುದು ಸಂತಸದ ವಿಚಾರವಾಗಿದೆ, ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಶೂನ್ಯ ಎಂದು ಹೇಳಿಕೆ ನೀಡುತ್ತಿದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್,ಗೆ ರಾಜ್ಯ ಸರ್ಕಾರದ ಅನುದಾನ ಬಿಡುಗಡೆಯು ಕಪಾಳ ಮೋಕ್ಷ ಮಾಡಿದಂತಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶುಭದರಾವ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜನಪ್ರಿಯ ಗ್ಯಾರಂಟಿ ಯೋಜನೆಗಳ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದ ಪ್ರತೀ ಕ್ಷೇತ್ರಗಳಿಗೆ ತಲಾ 250 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುತ್ತಿದ್ದು ಆ ಅನುದಾನಗಳು ಕಾರ್ಕಳ ಕ್ಷೇತ್ರದ ಜನತೆಗೆ ನೇರವಾಗಿ ದೊರಕುತ್ತದೆ.ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ ಯೋಜನೆಯ ಉಚಿತ ವಿದ್ಯುತ್ ಗಾಗಿ ಕಾರ್ಕಳ ವಿಭಾಗದಲ್ಲಿ 17 ತಿಂಗಳಿಂದ 54.18 ಕೋಟಿ ರೂಪಾಯಿಗಳ ವಿದ್ಯುತ್, ಗಳನ್ನು ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ನೀಡಿದೆ ಎಂದು ಸಂಬಂದಪಟ್ಟ ಇಲಾಖೆಗಳ ಅಂಕಿ ಅಂಶಗಳು ಸಾಕ್ಷಿ ಹೇಳುತ್ತಿವೆ.

ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಇತರ ರಾಜ್ಯಗಳಲ್ಲಿ ಬಿಜೆಪಿ ತನ್ನ ಪ್ರಮುಖ ಚುನಾವಣಾ ಪ್ರಣಾಳಿಕೆ ಅಂಶವಾಗಿ ಘೋಷಿಸಿಕೊಂಡಿವೆ ಇದು ಗ್ಯಾರಂಟಿ ಯೋಜನೆಗಳು ಎಷ್ಟು ಪ್ರಭಾವಿಯಾಗಿವೆ ಎನ್ನುವುದಕ್ಕೆ ದೊಡ್ಡ ಉದಾಹರಣೆಯಾಗಿದೆ ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಶೂನ್ಯ ಎನ್ನುತ್ತಾ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯಗಳೆಂದು ಅಪಹಾಸ್ಯ ಮಾಡುತ್ತಾ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಅವಹೇಳನ ಮಾಡುತ್ತಿದ್ದ ಶಾಸಕ ಸುನೀಲ್ ಕುಮಾರ್ ಇನ್ನಾದರೂ ಕಣ್ಣು ತೆರೆದು ನೋಡಲಿ ಎಂದು ಶುಭದರಾವ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement

Trending