Connect with us

Politics

ತಿರುಪತಿಯಲ್ಲಿ ಕರ್ನಾಟಕ ಸರ್ಕಾರದ ವತಿಯಿಂದ ಸುಸಜ್ಜಿತ ವಸತಿ ಸಂಕೀರ್ಣ ಲೋಕಾರ್ಪಣೆ

Published

on

ಜಗತ್ತಿನ ಪ್ರಸಿದ್ದ ಹಿಂದು ಧಾರ್ಮಿಕ ಕ್ಷೇತ್ರವಾದ ತಿರುಪತಿಯಲ್ಲಿ ಕರ್ನಾಟಕ ರಾಜ್ಯ ಛತ್ರದಲ್ಲಿ ರಾಜ್ಯ ಸರ್ಕಾರದ ವತಿಯಿಂದ 132 ಕೊಠಡಿ ಸಾಮರ್ಥ್ಯವುಳ್ಳ ‘ಐಹೊಳೆ’ ಹೆಸರಿನ ನೂತನ ಬ್ಲಾಕ್‌ ನಿರ್ಮಿಸಲಾಗಿದ್ದು, ಇದನ್ನು ಕರ್ನಾಟಕ ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖಾ ಸಚಿವರಾದ ರಾಮಲಿಂಗ ರೆಡ್ಡಿಯವರು ಲೋಕಾರ್ಪಣೆಗೊಳಿಸಿದರು.

ಕರ್ನಾಟಕ ಸರ್ಕಾರವು ತಿರುಪತಿಯಲ್ಲಿ ಯಾತ್ರಾರ್ಥಿಗಳಿಗೆ ಸುಮಾರು ₹200 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಮೂರು ವಸತಿ ಸಂಕೀರ್ಣಗಳು, ಒಂದು ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ಹಾಲಿ ಇದ್ದ ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿ ಕೈಗೆತ್ತಿಕೊಂಡಿದೆ.

ಇದರಲ್ಲಿ ಮೊದಲ ಹಂತದಲ್ಲಿ 132 ಹವಾನಿಯಂತ್ರಣ ರಹಿತ ಕೊಠಡಿಗಳನ್ನು ಹೊಂದಿರುವ ಐಹೊಳೆ ಬ್ಲಾಕ್‌,ನ್ನು ಸಚಿವರು ಲೋಕಾರ್ಪಣೆಗೊಳಿಸುದರು.

ಉಳಿದಂತೆ ನೂತನವಾಗಿ ತಿರುಮಲದಲ್ಲಿ ನಿರ್ಮಿಸಲಾಗಿರುವ ವಸತಿ ಸಂಕೀರ್ಣಗಳ ಪೈಕಿ ಅತೀ ಗಣ್ಯ ವ್ಯಕ್ತಿಗಳು ಹಾಗೂ ಗಣ್ಯ ವ್ಯಕ್ತಿಗಳು ತಂಗಲು ನಿರ್ಮಿಸಿರುವ ಶ್ರೀ ಕೃಷ್ಣದೇವರಾಯ ಬ್ಲಾಕ್ ನಲ್ಲಿನ 36 ಹವಾ ನಿಯಂತ್ರಿತ ಸೂಟ್‌ಗಳನ್ನು ಹಾಗೂ 1000 ಆಸನಗಳ ಸಾಮರ್ಥ್ಯವುಳ್ಳ ತಿರುಮಲದಲ್ಲಿಯೇ ಬೃಹತ್ ಹಾಗೂ ನವೀನ ಮಾದರಿಯ ಸುಸಜ್ಜಿತ ಕಲ್ಯಾಣ ಮಂಟಪವಾದ ಶ್ರೀ ಕೃಷ್ಣ ಒಡೆಯರ್ ಬ್ಲಾಕ್ ಕಟ್ಟಡಗಳ ಕಾಮಗಾರಿ ಮುಕ್ತಾಯಗೊಂಡಿದ್ದು, ಅಂತಿಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲಾಗುತ್ತಿದ್ದು, ಈ ವರ್ಷದ ಮಾರ್ಚ್ ಮಾಹೆಯಲ್ಲಿ ಸದರಿ ಕಟ್ಟಡಗಳನ್ನು ಉದ್ಘಾಟಣೆಗೊಳಿಸಿ ಯಾತ್ರಾರ್ಥಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಸಚಿವರು ಉದ್ಘಾಟನೆಯ ಬಳಿಕ ತಿಳಿಸಿದರು.

Advertisement

Trending