Connect with us

ಕಾರ್ಕಳ

ಕಾರ್ಕಳ: ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿಯ ವಿರುದ್ಧ ಯುವ ಕಾಂಗ್ರೇಸ್ ಪ್ರತಿಭಟನೆ

Published

on

ಕೇಂದ್ರ ಬಿಜೆಪಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ 2 ರೂಪಾಯಿ ಪ್ರತಿ ಲೀಟರ್‌ಗೆ ಏರಿಸಿ ಹಾಗೂ ಅಡುಗೆ ಅನಿಲದ ಮೇಲೆ 50 ರೂಪಾಯಿಯನ್ನು ಏರಿಸುವುದರ ಮೂಲಕ ತನ್ನ ಜನವಿರೋಧಿ ನೀತಿಯನ್ನು ತೋರ್ಪಡಿಸಿದ್ದು ಕೇಂದ್ರ ಬಿಜೆಪಿ ಸರ್ಕಾರದ ಈ ಜನವಿರೋಧಿ ನೀತಿಯ ವಿರುದ್ಧ ಕಾರ್ಕಳ ಯುವ ಕಾಂಗ್ರೆಸ್ ಸಮಿತಿ ಹಾಗೂ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಕಾರ್ಕಳ ಬಸ್ ನಿಲ್ದಾಣದಲ್ಲಿ ಪ್ರತಿಭಟನಾ ಸಭೆಯು ನಡೆಯಿತು.

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಮಾತನಾಡಿ ಇಂಧನ ಬೆಲೆ ಏರಿಕೆಯು ಕೇಂದ್ರ ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ದಿನ ನಿತ್ಯದ ಗೋಳಾಗಿದ್ದರೂ ಅದರ ವಿರುದ್ದ ತುಟಿಪಿಟಿಕ್ ಎನ್ನದೇ ರಾಜ್ಯ ಸರ್ಕಾರದ ವಿರುದ್ದ ಮಾತನಾಡುತ್ತಿರುವ ಸುನೀಲ್ ಕುಮಾರ್ ಪರಶುರಾಮ ಥೀಮ್ ಪಾರ್ಕ್ ಹಗರಣವನ್ನು ತನ್ನ ಬಗಲಿನಲ್ಲಿ ಇಟ್ಟುಕೊಂಡ ಒಬ್ಬ ಧರ್ಮ ಭ್ರಷ್ಟ ರಾಜಕಾರಣಿಯಾಗಿದ್ದಾರೆ ಎಂದು ಟೀಕಿಸಿದರು.

ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಬಿಪಿನ್ ಚಂದ್ರಪಾಲ್ ಮಾತನಾಡಿ ಜನರ ಜೀವನಮಟ್ಟ ಸುಧಾರಣೆಗಾಗಿ ಬಡ ಜನರಿಗೆ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದ್ದು ಅದನ್ನು ಟೀಕಿಸುವ ಬಿಜೆಪಿ ನಾಯಕರು ಮೊದಲು ತಾವು ಪಡೆಯುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಸರ್ಕಾರಕ್ಕೆ ಹಿಂತಿರುಗಿಸಲಿ ಎಂದರು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡುತ್ತಾ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ 70 ಲಕ್ಷ ಲೀಟರ್‌ ಹಾಲು ಉತ್ಪಾದನೆಯಾಗುತ್ತುದ್ದರೆ ಇಂದು ಕಾಂಗ್ರೆಸ್ ಆಡಳಿತದಲ್ಲಿ 95 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು ಪ್ರಸ್ತುತ ಹೆಚ್ವುವರಿ ಉತ್ಪಾದನೆಯಾಗುತ್ತಿರುವ ಹಾಲನ್ನು ಪ್ರತೀ ಪ್ಯಾಕೆಟ್,ನಲ್ಲಿ 50 ಮಿಲೀ ಹಾಲನ್ನು ಜನರಿಗೆ ವಿತರಿಸುತ್ತಿದ್ದು ರಾಜ್ಯದ ರೈತರಿಗೆ , ಹೈನುಗಾರರಿಗೆ ಉಪಯೋಗವಾಗಲೆಂದು ರಾಜ್ಯ ಸರ್ಕಾರ ಅಲ್ಪ ಪ್ರಮಾಣದ ಬೆಲೆ ಏರಿಕೆ ಮಾಡಿದ್ದು ಇದರ ನೇರ ಫಲಾನುಭವಿಗಳು ರಾಜ್ಯದ ಹೈನುಗಾರರಾಗಿದ್ದಾರೆ, ಸರ್ಕಾರದ ಈ ರೈತಪರ ನಿಲುವನ್ನು ವಿರೋಧಿಸುತ್ತಿರುವ ಬಿಜೆಪಿ ನಿಜವಾದ ರೈತ ವಿರೋದಿಯಾಗಿದೆ ಎಂದರು.

ಈ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ಸುಧಾಕರ ಕೋಟ್ಯಾನ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಲಿಕ್ ಅತ್ತೂರು, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಭಾನು ಭಾಸ್ಕರ್, ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು, NSUI ಪದಾಧಿಕಾರಿಗಳು, ಪುರಸಭಾ ಸದಸ್ಯರು, ಚುನಾಯಿತ ಜನಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾರ್ಕಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೂರಜ್ ಶೆಟ್ಟಿ ನಕ್ರೆ ಪ್ರಸ್ತಾಪಿಸಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ಧನ್ಯವಾದವಿತ್ತರು, ಬ್ಲಾಕ್ ಕಾಂಗ್ರೆಸ್ ವಕ್ತಾರರಾದ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರ್ವಹಿಸಿದರು.

Click to comment

Leave a Reply

Your email address will not be published. Required fields are marked *

Advertisement

Trending