Connect with us

ಜಿಲ್ಲೆ

ಯುವ ಕಾಂಗ್ರೆಸ್ ಬೈಂದೂರು ವತಿಯಿಂದ ಪಹಲ್ಗಾಮ್‌ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನಾ ಹಾಗೂ ಸಂತಾಪ ಸಭೆ

Published

on

ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಕ್ಷಯ್ ಶೆಟ್ಟಿಯವರ ನೇತೃತ್ವದಲ್ಲಿ, ಯುವ ಕಾಂಗ್ರೆಸ್ ಕಾರ್ಯದರ್ಶಿ ಸೂರಜ್ ಜಿ ಪೂಜಾರಿಯವರ ಮಾರ್ಗದರ್ಶನದಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನಾ ಹಾಗೂ ಸಂತಾಪ ಸಭೆ ನಡೆಯಿತು.

ಈ ಪ್ರತಿಭಟನಾ ಸಭೆಗೆ ಬೈಂದೂರು ಬ್ಲಾಕ್ ಕಿಸಾನ್ ಘಟಕ ಹಾಗೂ ಅಲ್ಪಸಂಖ್ಯಾತ ಘಟಕದ ನಾಯಕರು ಬೆಂಬಲ ನೀಡಿದರು.ಮಾಜಿ ಶಾಸಕರಾದ ಕೆ. ಗೋಪಾಲ್ ಪೂಜಾರಿ, ಹಿರಿಯ ಕಾಂಗ್ರೆಸ್ ನಾಯಕರಾದ ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಮೋಹನ್ ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ವಿಕಾಸ್ ಹೆಗ್ಡೆ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗ ಉಪಾಧ್ಯಕ್ಷರಾದ ಕೆ. ಚಂದ್ರ ಶೇಖರ್ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರಮೋದ್ ಪೂಜಾರಿ ನಾವುಂದ, ಉಡುಪಿ ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ರೋಶನ್ ಶೆಟ್ಟಿ ಹಾಗೂ ಅನೇಕ ಬೈಂದೂರು ಸ್ಥಳಿಯ ನಾಯಕರರು ಉಪಸ್ಥಿತರಿದ್ದರು.

Advertisement

Trending