Connect with us

ಕಾರ್ಕಳ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಶಿಯಲ್ ಮೀಡಿಯಾದಲ್ಲಿ ಕೊಲೆ ಬೆದರಿಕೆ: ಕಾರ್ಕಳದ ಯುವಕನ ಬಂಧನ

Published

on

ಮಂಗಳೂರು ಸುಹಾಸ್ ಶೆಟ್ಟಿ ಕೊಲೆಯ ನಂತರ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ನಿಂದನೆ ಮಾಡುತ್ತಿದ್ದು ಎಗ್ಗಿಲ್ಲದೆ ಸಾಗುತ್ತಿದ್ದು ಇದೀಗ ಇಂತದ್ದೇ ಪ್ರಕರಣವೊಂದರಲ್ಲಿ ಕಾರ್ಕಳ ಪೋಲಿಸರು ಆರೋಪಿಯನ್ನು ಬಂಧಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೊಂದರೆ ಹಿಂದುಗಳಿಗೆ ನೆಮ್ಮದಿ ಎಂದು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದ ಸಂಪತ್ ಸಾಲಿಯಾನ್ ಎನ್ನುವ ಯುವಕನನ್ನು ಕಾರ್ಕಳ ಪೊಲೀಸರು ಬಂದಿಸಿದ್ದಾರೆ. ಈತನು ಬೆಂಗಳೂರಿನಲ್ಲಿ ಹೋಂ ಗಾರ್ಡ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದು ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ ಕಾರಣಕ್ಕೆ ಬಂಧಿಸಲಾಗಿದೆ.

ಕಾರ್ಕಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೂರಜ್ ಶೆಟ್ಟಿ ನಕ್ರೆ ಅವರು ಈತನ ಮೇಲೆ ಕಾರ್ಕಳ ಠಾಣೆಯಲ್ಲಿ ಕೇಸು ದಾಖಲಿಸಿದ್ದು ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಈತನನ್ನು ಬಂಧಿಸಿದ್ದಾರೆ.

Advertisement

Trending