Connect with us

ಕಾರ್ಕಳ

ರಾಜ್ಯ ಸರ್ಕಾರದ ಆದೇಶದಂತೆ ದೇಶದ ಸೈನಿಕರ ಶ್ರೇಯಸ್ಸಿಗಾಗಿ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Published

on

ಏಪ್ರಿಲ್ 22 ರಂದು ಕಾಶ್ಮೀರದ ಪೆಹಲ್ಗಾಮ್, ನಲ್ಲಿ ಪ್ರವಾಸಿಗರ ಮೇಲೆ ಪಾಕಿಸ್ತಾನ ಪ್ರೇರಿತ ಉಗ್ರಗಾಮಿಗಳು ನಡೆಸಿದ ಪೈಶಾಚಿಕ ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮೂಲಕ ಉಗ್ರಗಾಮಿಗಳ ಅಡಗುತಾಣಗಳನ್ನು ದ್ವಂಸಗೊಳಿಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ದೇಶಕ್ಕಾಗಿ ಹೋರಾಡುತ್ತಿರುವ ಸೈನಿಕರಿಗೆ ಶಕ್ತಿ ತುಂಬಲು, ಸೈನಿಕರ ಶ್ರೇಯಸ್ಸಿಗಾಗಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಟ್ಟ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ರಾಜ್ಯ ಸರ್ಕಾರದ ಆದೇಶದಂತೆ ಹಾಗೂ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾದ್ಯಕ್ಷರಾದ ಉದಯ ಶೆಟ್ಟಿ ಮುನಿಯಾಲು ಅವರ ಸೂಚನೆಯಂತೆ ಇಂದು ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆಯು ನಡೆಯಿತು.

ನಂತರ ದೇವಸ್ಥಾನದ ಮುಂಭಾಗದಲ್ಲಿ ಭಕ್ತಾದಿಗಳು ಸೇರಿ ಭಾರತೀಯ ಸೈನಿಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು, ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಮಾತನಾಡಿ ಸೈನಿಕರು ದೇಶದ ಗಡಿಯನ್ನು ಕಾಯುತ್ತಿದ್ದು ದೇಶದ ಪ್ರಜೆಗಳಾದ ನಾವು ಸೈನಿಕರಿಗಾಗಿ ದೇವರಲ್ಲಿ ಪ್ರಾರ್ಥನೆಯನ್ನು ಸಲ್ಲಿಸುವುದು ನಮ್ಮ ಕರ್ತವ್ಯ ಎಂದರು. ನಿವೃತ್ತ ಶಿಕ್ಷಕರಾದ ಸಾಯಿನಾಥ ಶೆಟ್ಟಿ ಮಾತನಾಡಿ ಭಯೋತ್ಪಾದಕರನ್ನು ಪೋಷಿಸುತ್ತಿರುವ ಪಾಕಿಸ್ತಾನವನ್ನು ಮಟ್ಟಹಾಕುವುದು ಇಂದಿನ ಅನಿವಾರ್ಯತೆಯಾಗಿದೆ ಎಂದರು. ದೇವಸ್ಥಾನದ ವ್ಯವಸ್ಥಾಪನಾ ಮಂಡಳಿತ ಅಧ್ಯಕ್ಷರಾದ ಸುರೇಂದ್ರ ಶೆಟ್ಟಿ ಕೋರಿಬೆಟ್ಟು ಅವರು ಮಾತನಾಡಿ ದೇಶದ ಸೈನಿಕರ ಶ್ರೇಯಸ್ಸಿಗಾಗಿ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಪೂಜೆಯನ್ನು ಸಲ್ಲಿಸಲಾಗಿದ್ದು ಭಾರತೀಯರಾದ ನಾವೆಲ್ಲರೂ ಇಂದು ಸೈನಿಕರೊಂದಿಗೆ ನಿಂತು ಅವರ ನೈತಿಕ ಸ್ಥೈರ್ಯವನ್ನು ಹೆಚ್ಚಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರಾದ ಶರತ್ ಶೆಟ್ಟಿ, ನಳಿನಾಕ್ಷಿ, ಅರುಣ್ ರಾವ್, ಸುರೇಶ್ ಸಾಲ್ಯಾನ್, ಪ್ರಭಾಕರ ಶೆಟ್ಟಿ ಬೆಳ್ಮಣ್, ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಸಂತೋಷ್ ದೇವಾಡಿಗ ಬೋಳ, ಕಿಶೋರ್ ಬೋಳ, ಉತ್ತಮ್ ರೈ ಮತ್ತಿತರು ಉಪಸ್ಥಿತರಿದ್ದರು.

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಚಾರ್ಯ ಇನ್ನಾ ಸ್ವಾಗತಿಸಿ ಅರುಣ್ ರಾವ್ ಧನ್ಯವಾದವಿತ್ತರು.

Advertisement

Trending